ಬೆಂಗಳೂರಿನ ಶಾಲೆಗಳಿಗೆ Bomb ಬೆದರಿಕೆ ಬಂದಿದ್ದು ಎಲ್ಲಿಂದ ಗೊತ್ತಾ?
Sunday, April 24, 2022
ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ 8 ರಂದು ಆರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಬಾಂಬ್ ಬೆದರಿಕೆ ಇ ಮೇಲ್ ಗಳ ಹಿಂದೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳ ಕೈವಾಡದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇ-ಮೇಲ್ ಕಳುಹಿಸಿದ್ದ ಸರ್ವರ್ ಗಳ ಬಗ್ಗೆ ಗೂಗಲ್‌ನ ಮಾಹಿತಿ ಮೇರೆಗೆ ಪರಿಶೀಲಿಸಿದಾಗ ಪಾಕಿಸ್ತಾನದಿಂದ ಮೇಲ್ ಗಳು ಬಂದಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಏಪ್ರಿಲ್ 8 ರಂದು ಬೆಂಗಳೂರಿನ ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂ, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರದ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೆಬ್ಬಗೋಡಿ ವ್ಯಾಪ್ತಿಯ ಎಬಿನೈಸರ್ ಸ್ಕೂಲ್, ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್ ಗೆ ಬೆದರಿಕೆ ಕರೆ ಇ ಮೇಲ್ ಬಂದಿತ್ತು.