BREAKING NEWS ; ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ
Thursday, April 14, 2022
ಬೆಂಗಳೂರು:ವಿರೋಧ ಪಕ್ಷಗಳ ತೀವ್ರ ಒತ್ತಾಯ, ಬಿಜೆಪಿ ಹೈಕಮಾಂಡ್ ಸೂಚನೆ ಹಾಗೂ ಸಿಎಂ ಸಲಹೆ ಮೇರೆಗೆ ಕ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.
ಸಾವನ್ನಪ್ಪಿರುವ ಗುತ್ತಿಗೆದಾರ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ. ಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವೆ ಇಲ್ಲ. ನನ್ನ ವಿರುದ್ಧ ಷಡ್ಯಂತ್ರಗಳು ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವುದಿಲ್ಲ ಎಂದು ನಿನ್ನೆ ಈಶ್ವರಪ್ಪ ಹೇಳಿದ್ದರು.
ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಳೆದ 2 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು. ಗುರುವಾರ ಬೆಳಗ್ಗೆ ಸಿಎಂ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆಯನ್ನು ಹಾಕಿದ್ದರು.