ಮಂಗಳೂರು: ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ದಿಢೀರ್ ಏರುಪೇರು Kalladka
Tuesday, April 5, 2022
ಮಂಗಳೂರು: ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡಿದೆ.
ಇಂದು ಸಂಜೆ ದಿಢೀರ್ ಎಂದು ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರು ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಇದೀಗ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.