ರಾಜ್ಯದಲ್ಲೀಗ ಆಝಾನ್ ವಿವಾದ: ಪೊಲೀಸ್ ಆಯುಕ್ತ ಕಮಲ್ ಪಂತ್ ತೆಗೆದುಕೊಂಡ ನಿರ್ಣಯವೇನು?
Tuesday, April 5, 2022
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ, ಆಜಾನ್ ಕೂಗುವ ಬಗ್ಗೆ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಶಬ್ಧಮಾಲಿನ್ಯ ರೂಲ್ಸ್ ಪಾಲಿಸದ 301 ಧಾರ್ಮಿಕ ಸ್ಥಳಗಳಿಗೆ ನೋಟಿಸ್ ನೀಡಲಾಗಿದೆ.
ಮಂದಿರ, ಮಸೀದಿ, ಚರ್ಚ್‌ಗಳಿಗೆ ಈ ನೋಟಿಸ್ ನೀಡಲಾಗಿದ್ದು, ಶಬ್ಧಮಾಲಿನ್ಯ ನಿಯಮ ಸರಿಯಾಗಿ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, 'ಹೈಕೋರ್ಟ್ ಆದೇಶವನ್ನು ಪಾಲಿಸಬೇಕು. ಕಾನೂನು ಉಲ್ಲಂಘನೆ ಮಾಡಿದಲ್ಲಿ ಶಿಕ್ಷೆ ಆಗುತ್ತೆ. ಇನ್ನು ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಹಲವೆಡೆ ಮೈಕ್‌ಗಳನ್ನ ಜಪ್ತಿ ಮಾಡಲಾಗಿದೆ ಎಂದರು.