ಉಡುಪಿ ಜಿಲ್ಲೆಗೆ ಪ್ರವೇಶಿಸಲು ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ
Thursday, April 14, 2022
ಉಡುಪಿಯ ಬೈಂದೂರು ತಾಲೂಕಿನ ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ನಾಳೆ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಬಂಧಿಸಿ ಸಿ.ಆರ್.ಪಿ.ಸಿ ಸೆಕ್ಷನ್ 133, 143 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಈ ಕ್ರಮ ಕೈಗೊಂಡಿದ್ದಾರೆ.