-->

ಉಡುಪಿ; ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ; ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ


ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್  ಪ್ರತಿಭಟನೆ ನಡೆಸಿತು. 


ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಅಜ್ಜರಕಾಡು ಹುತಾತ್ಮ ಸೈನಿಕ  ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು.

 ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಪೆಟ್ರೋಲ್ ಡೀಸೆಲ್ ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ದಿನೇದಿನೆ ಹೆಚ್ಚುತ್ತಲೇ ಇದೆ. ಆದರೆ ರಾಜ್ಯ ಮತ್ತು ಕೇಂದ್ರ ಸರಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಸಾಮಾನ್ಯ ಜನರಿಗೆ, ಮಧ್ಯಮವರ್ಗದವರಿಗೆ ,ಬಡವರಿಗೆ ಬೆಲೆ ಹೆಚ್ಚಳದಿಂದ ಕಷ್ಟವಾಗಿದೆ. 

ಆದರೆ ಸರಕಾರ ಮಾತ್ರ ಧರ್ಮದ ಆಧಾರದಲ್ಲಿ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ನಿರತವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.
Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99