Udupi ;ಹುಟ್ಟು ಹಬ್ಬದ ಖುಷಿಯಲ್ಲಿ ಇದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು
Friday, April 22, 2022
ಹೆದ್ದಾರಿ ಬದಿ ನಿಲ್ಲಿಸಿದ ಬುಲೆಟ್ ಟ್ಯಾಂಕರ್ ಗೆ ಸ್ಕೂಟಿ ಡಿಕ್ಕಿ ಹೊಡೆದು ಸವಾರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಮಲ್ಪೆ ಕೊಡವೂರು ನಿವಾಸಿ ಮಹೇಶ್ ಮೃತ ಯುವಕ. ಮಹೇಶ್‌ಗೆ ಹುಟ್ಟು ಹಬ್ಬದ ಖುಷಿ ಸಹಿತ ಮದುವೆ ನಿಗದಿಯಾಗಿತ್ತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಂಗಳೂರು ಕಡೆಯಿಂದ ತನ್ನ ಸ್ಕೂಟರ್ ನಲ್ಲಿ ಮಲ್ಪೆ ಮನೆಗೆ ವಾಪಾಸಾಗುತ್ತಿದ್ದ ವೇಳೆ ಹೆಜಮಾಡಿ ಟೋಲ್ ಬಳಿ ಹೆದ್ದಾರಿ ಬದಿ ನಿಲ್ಲಿಸಿದ ಬುಲೆಟ್ ಟ್ಯಾಂಕರ್ ಗೆ ಡಿಕ್ಕಿಯಾಗಿ ದಾರುಣಾವಾಗಿ ಮೃತಪಟ್ಟಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.