UDUPI-ಮಗನ ಸಾವಿನಲ್ಲೂ ಮಾನವೀಯತೆ ಮೆರೆದ ತಂದೆ ( Video)
Tuesday, April 5, 2022
ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಮಗನ ಅಂಗಾಂಗ ದಾನ ಮಾಡುವ ಮೂಲಕ ತಂದೆ ನೋವಿನಲ್ಲೂ ಮಾನವೀಯತೆ ಮೆರೆದಿದ್ದಾರೆ..
ಉಡುಪಿಯ ಬ್ರಹ್ಮಾವರದ ಉಪ್ಪಿನಕೋಟೆ ಬಳಿ, ಇದೇ ತಿಂಗಳ 4ರಂದು, ಹತ್ತೊಂಬತ್ತು ವರ್ಷದ ಶ್ರೀ ಶ್ರೀನಿವಾಸ್ ಅವರ ಬೈಕ್ ಅಪಘಾತವಾಗಿತ್ತು. ಕೂಡಲೇ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಿಸಿ ಚಿಕಿತ್ಸೆ ಕೊಟ್ಟು ವೈದ್ಯರು ಶ್ರೀನಿವಾಸ್ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.
ಶ್ರೀನಿವಾಸ್ ಅವರ ತಂದೆ ಶ್ರೀ ರಾಜು ನಾಯರಿ ಅವರು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ. ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಎರಡು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು, ಯಕೃತ್ತು ಅನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.