UDUPI-ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಅಧ್ಯಕ್ಷ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ
Friday, April 1, 2022
ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ.
ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.