Udupi- ಈಶ್ವರಪ್ಪ ವಿರುದ್ದ ಆರೋಪಿಸಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ
Thursday, April 14, 2022
ಸಚಿವ ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿಟ್ಟು ಉಡುಪಿಯಲ್ಲಿ ಬಂದು ಆತ್ಮಹತ್ಯೆಗೆ ಶರಣಾದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕೇಸ್ ಸದ್ಯ ತನಿಖೆ ಹಂತದಲ್ಲಿ ಇದೆ. ಈ ನಡುವೆ ಇಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಉಡುಪಿ ನಗರಠಾಣೆ ಪೊಲೀಸರು
ಎಫ್ಐಆರ್ ನಲ್ಲಿರುವ ಎಲ್ಲಾ ಅಂಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸುತ್ತಿದ್ದಾರೆ.. ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಮೊದಲ ಆರೋಪಿ, ಹೀಗಾಗಿ ಸಚಿವರೇ ಆರೋಪಿಯಾಗಿರುವ ಕಾರಣ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನಹ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಎಫ್ಐಆರ್ ಕಾಫಿಯನ್ನು ಉಡುಪಿ ಸೆಷನ್ಸ್ ಕೋರ್ಟ್ ಜಡ್ಜ್ ಬೆಂಗಳೂರಿಗೆ ರವಾನಿಸಿದ್ದಾರೆ..
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಿಸಿಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿ, ಸಂತೋಷ್ ಗೆಳೆಯರ ವೀಡಿಯೋ ಹೇಳಿಕೆಯನ್ನು ಉಡುಪಿ ನಗರಠಾಣೆ ಪೊಲೀಸರು ಪಡೆಯುತ್ತಿದ್ದಾರೆ..