
'ಬ್ರಹ್ಮ ಮಗಳ ಮೇಲೆಯೇ ಅತ್ಯಾಚಾರ ಮಾಡಿದ' ಎಂದು ಪಾಠ ಮಾಡಿದ ಪ್ರೊಫೆಸರ್
Thursday, April 7, 2022
ಬ್ರಹ್ಮ ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಿದ್ದನೆಂದು ಪುರಾಣಗಳಲ್ಲಿನ ಅತ್ಯಾಚಾರದ ಉದಾಹರಣೆಗಳನ್ನು ಉಲ್ಲೇಖಿಸಿ ಪ್ರಾಧ್ಯಾಪಕರೋರ್ವರು ತರಗತಿ ನಡೆಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪವನ್ನು ಪ್ರಚೋದಿಸಿದ ಪ್ರಾಧ್ಯಾಪಕರನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಜಿತೇಂದ್ರ ಕುಮಾರ್ ಅವರು ವೈದ್ಯಕೀಯ ನ್ಯಾಯಶಾಸ್ತ್ರದ ಕುರಿತು ತರಗತಿಯನ್ನು ನಡೆಸುವಾಗ ಪುರಾಣದಲ್ಲಿ 'ಅತ್ಯಾಚಾರ' ದ ಉಲ್ಲೇಖಗಳನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.