ಉಡುಪಿಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ; ಮೇ 17,19 ORANGE, 18 ಕ್ಕೆ RED ALERT ಎಚ್ಚರಿಕೆ
Monday, May 16, 2022
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯಲ್ಲಿ ಮುಂದಿನ ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.. ಉಡುಪಿ ಜಿಲ್ಲೆಯಲ್ಲಿ 17 ರಂದು ಹಾಗೂ 19 ರಂದು ಆರೆಂಜ್ ಅಲರ್ಟ್ ಹಾಗೂ 18 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇದ್ದು ವಿಪತ್ತನ್ನು ನಿಭಾಯಿಸುವಂತೆ, ಜಿಲ್ಲಾಡಳಿತ ಸೂಚನೆ ನೀಡಿದೆ. ಸಾರ್ವಜನಿಕರು ನದಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇದ್ದಂತೆ ಹಾಗೂ ನೆರೆಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ನೀಡಿದ್ದಾರೆ..