
ಗಂಡನಿಂದ ದೂರವಾದ ಚೆಲುವಿ ಬೇರೆ ಗಂಡಸರೊಂದಿಗೆ ಮಾತಾಡುತ್ತಿದ್ದಾಳೆ... ಸಂಶಯದಿಂದ ಹತ್ಯೆ ಮಾಡಿದ ಆರೋಪಿ AREST
ಉಡುಪಿಯ ಹಿರಿಯಡ್ಕದಲ್ಲಿ ನಡೆದ ತಾಯಿ ಮಗಳ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಲಿಸರು 48 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.
ಹರೀಶ. ಆರ್ ಯಾನೆ ಗಣೇಶ (29) ಬಂಧಿತ ಆರೋಪಿ.. ಹಿರಿಯಡ್ಕದ ಅತ್ರಾಡಿ ಗ್ರಾಮದ ಮದಗ ಮುಳ್ಳಗುಜ್ಜೆ ಎಂಬಲ್ಲಿ ವಾಸವಾಗಿರುವ ಚೆಲುವಿ (28) ಮತ್ತು 10 ವರ್ಷ ಪ್ರಾಯದ ಮಗಳನ್ನು ದಿನಾಂಕ 8 ರಂದು ರಾತ್ರಿ ಅಪರಿಚಿತರು ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿದ್ದರು.
ಈ ಬಗ್ಗೆ ಮೃತಳ ತಂಗಿ ದೇವಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂತು ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಹರೀಶ ಮೃತೆ ಚೆಲುವಿಯ ದೂರದ ಸಂಬಂಧಿಯಾಗಿದ್ದು, ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿರುತ್ತಾರೆ. ಗಂಡನಿಂದ ದೂರವಾಗಿರುವ ಅವಕಾಶವನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದನು. ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ದಿನಾಂಕ 08/05/2022 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದು ಚೆಲುವಿ ಮಲಗಿದ್ದ ಸಮಯ ಚೆಲುವಿಯನ್ನು ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದು ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದನು
ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50,000/- ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ OPPO ಮೊಬೈಲ್ ಪೋನ್‌ನ್ನು ಸುಲಿಗೆ ಮಾಡಿಕೊಂಡು ಹೋಗಿದ್ದನು..