ಬೆಂಗಳೂರಿನಲ್ಲಿ BJP ಸೇರ್ಪಡೆಗೊಂಡ ಪ್ರಮೋದ್ ಮಧ್ವರಾಜ್
Saturday, May 7, 2022
ಬೆಂಗಳೂರು; ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಿಗೆ ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ನಗರದ ಪರಾಗ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಪ್ರಮೋದ್ ಮಧ್ವರಾಜ್ ಅವರು ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ನಿಂದ ದೂರವಿದ್ದು ಬಿಜೆಪಿ ಸೇರ್ಪಡೆಗೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಸ್ಪಷ್ಟ ಹೇಳಿಕೆಗಳನ್ನು ಪ್ರಮೋದ್ ಮಧ್ವರಾಜ್ ನೀಡಿರಲಿಲ್ಲ. ನಿನ್ನೆಯು ಬಿಜೆಪಿ ಸೇರ್ಪಡೆಯಾಗುವ ಯಾವುದೇ ಮಾಹಿತಿ ನನ್ನಲ್ಲಿಲ್ಲ ಎಂದು ಹೇಳಿದ್ದರು.