ಉಡುಪಿಯಲ್ಲಿ ಮಳೆಗೆ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ BUS
Thursday, May 12, 2022
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಪ್ರಯಾಣಿಕರು ಸಣ್ಣ ಪುಟ್ಟ ಪಾರಾದ ಘಟನೆ ಉಡುಪಿ ಸಮೀಪದ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್, ಉಡುಪಿಯ ಉದ್ಯಾವರದ ಬಳಿಯ ಬಲಾಯಿಪಾದೆ ತಲುಪುತ್ತಿದ್ದಂತೆ ಮಳೆಗೆ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಎಪಿಎಂ ಹೆಸರಿನ ಖಾಸಗಿ ಬಸ್ ಇದಾಗಿದ್ದು ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ಉಡುಪಿ ಸಂಚಾರಿ ಠಾಣಾ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಂ ಉಂಟಾಗಿದ್ದು ಬಸ್ ನಜ್ಜುಗುಜ್ಜಾಗಿದೆ...