
ಉಡುಪಿ; ಬೈಕ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವು death
ವೇಗವಗಿ ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ನಿಯಂತ್ರಣ ತಪ್ಪಿಕೆಳಗೆ ಬಿದ್ದು ಮೃತಪಟ್ಟ ಘಟನೆ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ.
ಸುನಿತಾ (45) ಮೃತಪಟ್ಟ ಮಹಿಳೆ. ವರಂಗ ಕಡೆಯಿಂದ ಉಪ್ಪಳ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೈಕ್ ಸವಾರ ದಿವಾಕರ ಅವರ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.