ಉಡುಪಿ ರಸ್ತೆ ಅಪಘಾತದಲ್ಲಿ ಪಂಚಾಯತ್ ಅಧ್ಯಕ್ಷೆ ಸಾವು
Wednesday, May 18, 2022
ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಹಿಂಬದಿ ಸವಾರೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಎಂಬಲ್ಲಿ ನಡೆದಿದೆ.
ಲಲಿತಾ ಶೆಟ್ಟಿ ( 55 ) ಮೃತ ದುರ್ದೈವಿ. ಕಾಲ್ತೋಡು
ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಲಲಿತಾ ಶೆಟ್ಟಿ ಆಶಾ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪಂಚಾಯತ್ ತೆರಳಿ ನಂತರ ಮನೆಗೆ ಹೋಗುವಾಗ ಮಾರ್ಗ ಮಧ್ಯೆ ಘಟನೆ ನಡೆದಿದ್ದು, ತೀವ್ರವಾಗಿ ತಲೆಗೆ ಪೆಟ್ಟಾದ ಪರಿಣಾಮ ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ಪಿದ್ದಾರೆ.. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..