MANGALORE- ಹಿಜಾಬ್ ವಿವಾದ- ಡಿಸಿ ಜೊತೆಗಿನ ಮೀಟಿಂಗ್ ನಲ್ಲಿ ಏನಾಯಿತು ಗೊತ್ತಾ?
Monday, May 30, 2022
ಮಂಗಳೂರು: ಮಂಗಳೂರು ವಿ ವಿ ಕಾಲೇಜಿನಲ್ಲಿ ಹಿಜಾಬ್ ವಿವಾದದ ಬಗ್ಗೆ ಇಂದು ಹಿಜಾಬ್ ಗೆ ಪಟ್ಟು ಹಿಡಿದಿರುವ ವಿದ್ಯಾರ್ಥಿನಿಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರ ಜೊತೆ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಗಳು ವಿದ್ಯಾರ್ಥಿನಿಯರು ಸಿಂಡಿಕೇಟ್ ಸಭೆಯಲ್ಲಿ ಹಿಜಾನ್ ಧರಿಸುವುದನ್ನು ನಿಷೇಧಿಸಿದ ಬಗ್ಗೆ ತಿಳಿಸಿದ್ದಾರೆ. ಆದರೆ ಸಿಂಡಿಕೇಟ್ ಸಭೆಯ ನಿರ್ಣಯವನ್ನು ಜಿಲ್ಲಾ ಮಟ್ಟದಲ್ಲಿ ಪ್ರಶ್ನಿಸಲು ಆಗುವುದಿಲ್ಲ. ಸಿಂಡಿಕೇಟ್ ಸಭೆಯ ನಿರ್ಣಯವನ್ನು ಪಾಲಿಸಬೇಕು . ಮತ್ತು ಕಾಲೇಜಿನಲ್ಲಿ ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದೇನೆ . ಸಿಂಡಿಕೇಟ್ ಸಭೆಯ ನಿರ್ಣಯದ ಪ್ರತಿ ಸಿಕ್ಕಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದು ಅದನ್ನು ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.