ಉಡುಪಿ- ಕಾಪು ಮಾರಿಗುಡಿಗೆ ಭೇಟಿ ನೀಡಿದ ಬಾಲಿವುಡ್ ತಾರೆ POOJA HEGDE ( video)
Tuesday, May 3, 2022
ಕರಾವಳಿ ಮೂಲದ ಬಾಲಿವುಡ್ ಹಾಗೂ ಸೌತ್ ಇಂಡಿಯಾ ಸಿನಿಮಾಗಳಲ್ಲಿ ಹೆಸರುವಾಸಿಯಾದ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದರು.
ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿದ್ದರು. ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದರ್ಶನ ಸೇವೆಯಲ್ಲಿ ಪಾತ್ರಿಗಳಿಂದ ಆಶೀರ್ವಾದ ಪಡೆದರು. ಈ ಹಿಂದೆಯೂ ಮಾರಿಗುಡಿಗೆ ಬಂದಿದ್ದ ಪೂಜಾ ಹೆಗ್ಡೆ ಕ್ಷೇತ್ರದ ಬಗ್ಗೆ ತಮಗಿರುವ ಅಗಾಧ ಭಕ್ತಿ ಹಾಗೂ ಪ್ರೀತಿಯನ್ನು ಈ ವೇಳೆ ವ್ಯಕ್ತಪಡಿಸಿದರು. ಕುಟುಂಬ ಸದಸ್ಯರೊಂದಿಗೆ ದೇವಾಲಯದ ಅವರಣದಲ್ಲಿ ಕೆಲ ಕಾಲ ಕಳೆದರು. ಬಾಲಿವುಡ್ ಮಾತ್ರವಲ್ಲವೇ ತೆಲುಗು ತಮಿಳು ಸಿನಿಮಾಗಳಲ್ಲಿ ನಟಿಸಿ ಪೂಜಾ ಹೆಗ್ಡೆ ಮನೆಮಾತಾಗಿದ್ದಾರೆ. ಮಾತೃಭಾಷೆ ತುಳುವಿನಲ್ಲಿ ಸೊಗಸಾಗಿ ಮಾತನಾಡುತ್ತಾರೆ