ಉಡುಪಿ- ಪ್ರಥಮ PUC ಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ
Monday, May 2, 2022
ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಅನುತ್ತೀರ್ಣಗೊಂಡ ಹಿನ್ನೆಲೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆಯಲ್ಲಿ ನಡೆದಿದೆ.
ಸುದೀಪ್ ( 17 ) ಆತ್ಮಹತ್ಯೆ ಮಾಡಿಕೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿ. ಬೈಂದೂರು ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ
ವ್ಯಾಸಂಗ ಮಾಡುತ್ತಿದ್ದ ಸುದೀಪ್, ಅಂತಿಮ ಪರೀಕ್ಷಾ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..