ಒಂಟಿ ಮಹಿಳೆಯರನ್ನು TARGET ಮಾಡಿ ಸರಗಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್
Thursday, May 12, 2022
ಒಂಟಿಯಾಗಿ ಇರುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಉಡುಪಿಯ ಬೈಂದೂರು ಸಿ.ಪಿ.ಐ ತಂಡ ಬಂಧಿಸಿದೆ.
ವಿಜಯ್ ( 48 ) ಬಂಧಿತ ಕಳ್ಳ. ವಿಜಯ್
ಅನೇಕ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯಾಗಿದ್ದ, ಈತನನ್ನು ಮುಂಬಯಿ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಮನ್ ಬಳಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ 3,24,500 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..