
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಉಡುಪಿ ಯಲ್ಲಿ TEMPLE RUN
ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಕಾರ್ಯಕ್ರಮ ನಿಮಿತ್ತ ಉಡುಪಿಗೆ ಆಗಮಿಸಿದ್ದು, ಈ ವೇಳೆ ಉಡುಪಿಯ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ,
ನವಗ್ರಹ ಕಿಂಡಿ ಮೂಲಕ ಕೃಷ್ಣದರ್ಶನ ಪಡೆದರು. ಕೃಷ್ಣದರ್ಶನ ಬಳಿಕ ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳಿಂದ ಗೌರವ ಸ್ವೀಕರಿಸಿದರು.
ನಂತರ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ
ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು. ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ದೇವಳದ ಆಡಳಿತ ಮಂಡಳ ಬರಮಾಡಿಕೊಂಡಿತು. ನಿರ್ಮಲ
ಸೀತಾರಾಂನ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಸಾಥ್ ನೀಡಿದರು..