ಉಡುಪಿಯಲ್ಲಿ Tomato ಫ್ಲೂ ಸುದ್ದಿ-; ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದು ಹೀಗೆ...
Monday, May 16, 2022
ಉಡುಪಿಯಲ್ಲಿ ಪುಟ್ಟ ಮಗುವೊಂದಕ್ಕೆ ಟೊಮೇಟೊ ಪತ್ತೆಯಾಗಿದೆ ಅಂತ ವದಂತಿ ಹರಡಿತ್ತು.
ಆದ್ರೆ ಉಡುಪಿಯಲ್ಲಿ ಈವರೆಗೆ ಟೊಮೇಟೊ ಫ್ಲೂ ಪತ್ತೆಯಾಗಿಲ್ಲ ಅಂತ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ. ಮಕ್ಕಳಲ್ಲಿ ಜ್ವರ ಕಂಡು ಬಂದಾಗ ತಾಂತ್ರಿಕವಾಗಿ ಪರೀಕ್ಷೆ ನಡೆಸಲಾಗುತ್ತೆ
ಟೊಮೆಟೊ ಫ್ಲೂಗೆ ಹೋಲುವಂತಹ ಒಂದು ಪ್ರಕರಣ ಪತ್ತೆಯಾಗಿತ್ತು. ಮೂರು ತಿಂಗಳ ಹಿಂದೆ ಪ್ರಕರಣ ಪತ್ತೆಯಾಗಿತ್ತು ಫೂಟ್ ಆಂಡ್ ಹ್ಯಾಂಡ್ ಲಕ್ಷಣಗಳಿರುವ ಪ್ರಕರಣ ಇದಾಗಿತ್ತು ಈ ಬಗ್ಗೆ ಆರೋಗ್ಯ ಇಲಾಖೆಗೆ ನಾವು ವರದಿ ಮಾಡಿದ್ದೇವೆ ಟೊಮೇಟೋ ಫ್ಲೂ ಮತ್ತು ಈ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ ಅಂದಿದ್ದಾರೆ. ಇತ್ತೀಚಿಗೆ ಯಾವುದಾದರೂ ಹೊಸ ಪ್ರಕರಣ ಬಂದಿದೆಯೇ ಮಾಹಿತಿ ಸಂಗ್ರಹಿಸುತ್ತೇವೆ. ಖಾಸಗಿ ಕ್ಲಿನಿಕ್ ಗಳಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎಲ್ಲಾ ಮಕ್ಕಳ ತಜ್ಞರಿಗೂ ಅಲರ್ಟ್ ಇರಲು ಸೂಚಿಸಿದ್ದೇವೆ ಕೇರಳದಲ್ಲಿ ಪ್ರಕರಣ ಪತ್ತೆಯಾದ ನಂತರ ಮಕ್ಕಳ ತಜ್ಞರಿಗೆ ಸೂಚನೆಗಳನ್ನು ಕೊಟ್ಟಿದ್ದೇವೆ. ಟೊಮೆಟೊ ಫ್ಲೂ ಹೋಲುವಂತಹ ಜ್ವರ ಬಂದರೂ ತಿಳಿಸಲು ಹೇಳಿದ್ದೇವೆ ಈವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ
ಪೋಷಕರು ಆತಂಕ ಪಡುವ ಅಗತ್ಯ ಇಲ್ಲ. ಮಕ್ಕಳಲ್ಲಿ ಬೇರೆ ಬೇರೆ ತರದ ಫ್ಲೂಗಳು ಕಾಣಿಸಿಕೊಳ್ಳುತ್ತದೆ ನಿರಂತರ ಸರ್ವೇಕ್ಷಣೆ ನಡೆಸುತ್ತಿದ್ದೇವೆ ಅಂತ ಜಿಲ್ಲಾಧಿಕಾರಿ ತಿಳಿಸಿದ್ದಾರೆ..