Udupi- ಇಬ್ಬರು ನಕ್ಸಲರನ್ನು ಕಾರ್ಕಳಕ್ಕೆ ಕರೆತಂದ ಪೊಲೀಸರು
Wednesday, May 4, 2022
ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಂಧಿತರಾಗಿದ್ದ
ನಕ್ಸಲ್ ಪ್ರಮುಖ ನಾಯಕ ಬಿ.ಜಿ.ಕೃಷ್ಣಮೂರ್ತಿ ಮತ್ತು ನಕ್ಸಲ್ ಸದಸ್ಯೆ, ಸಾವಿತ್ರಿ ಅವರನ್ನು ಕಾರ್ಕಳ, ಹೆಬ್ರಿ, ಅಜೆಕಾರು ಠಾಣೆಗಳ ವ್ಯಾಪ್ತಿಯ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸ್ ಹಾಗೂ ನ್ಯಾಯಾಂಗ ತನಿಖೆಗಾಗಿ ಚಿಕ್ಕಮಗಳೂರಿನಿಂದ ಉಡುಪಿ ಜಿಲ್ಲೆಗೆ ಬಿಗು ಪೊಲೀಸ್ ಬಂದೋಬಸ್ತಿನಲ್ಲಿ ತರಲಾಗಿದೆ.
20 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಸುಮಾರು 12ಕ್ಕೂ ಅಧಿಕ ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಒಳಪಡಲಿದ್ದಾರೆ. 2005ರಲ್ಲಿ ಸಾಕೇತ್ ರಾಜನ್ ಹತ್ಯೆ ಬಳಿಕ ನಕ್ಶಲ್ ಚಟುವಟಿಕೆಯ ನಾಯಕತ್ವ ವಹಿಸಿಕೊಂಡಿದ್ದ ಬಿ.ಜಿ ಕೃಷ್ಣಮೂರ್ತಿಯನ್ನು ಕರ್ನಾಟಕದ ಗಡಿ ವಯನಾಡಿನಲ್ಲಿ 2021 ನಂಬರ್ 9ರಂದು ಬಂಧಿಸಲಾಗಿತ್ತು. ಬಿ.ಜಿ ಕೃಷ್ಣಮೂರ್ತಿ ಮೇಲೆ 53 ಹಾಗೂ ಕೇರಳ ವಯನಾಡಿನ ಕೊಯಿಕ್ಕೋಡ್ ಕಬಿನಿ ದಳದ ಮುಖ್ಯಸ್ಥೆ ಸಾವಿತ್ರಿ ಮೇಲೆ 22 ಪ್ರಕರಣಗಳಿವೆ.