
UDUPI ; ಮಕ್ಕಳು ದೇಶದ ಇತಿಹಾಸ ತಿಳಿದುಕೊಳ್ಳಬೇಕು; ಶೋಭಾ ಕರಂದ್ಲಾಜೆ
Tuesday, May 31, 2022
ಶಾಲಾ ಮಕ್ಕಳು ನಮ್ಮ ಚರಿತ್ರೆ ಕಲಿಯಬೇಕು, ದೇಶದ ಇತಿಹಾಸ ತಿಳಿದುಕೊಳ್ಳಬೇಕು. ಇತಿಹಾಸದಲ್ಲಿ ಆಗಿರುವ ಲೋಪದೋಷಗಳನ್ನು ತಿಳಿದು, ಬ್ರಿಟಿಷರ ದೇಶಕ್ಕೆ ಯಾಕೆ ಬಂದರು? ಮೊಘಲರು ಈ ದೇಶಕ್ಕೆ ಯಾಕೆ ಬಂದರು? ಘಜ್ನಿ ಮಹಮ್ಮದ್ 18 ಬಾರಿ ದಾಳಿ ಮಾಡಿದ್ದು ಯಾಕೆ? ನಮ್ಮ ಸಮಸ್ಯೆ ನಮ್ಮ ಕೊರತೆ ಏನು? ಎಲ್ಲವನ್ನು ನಮ್ಮ ಮಕ್ಕಳು ಅಧ್ಯಯನ ಮಾಡಬೇಕು ಅಂತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆ ಬರ್ಕಾಸು ಒತ್ತಾಯ ವಿಚಾರವಾಗಿ ಉಡುಪಿ ಪ್ರತಿಕ್ರಿಯೆ ನೀಡಿದರು.
ನಮ್ಮ ಮಕ್ಕಳು ಡಿಗ್ರಿ ಮಾಡಿದರೂ ದೇಶದ ಚರಿತ್ರೆ ಗೊತ್ತಿರುವುದಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದವರ ಬಗ್ಗೆ ಗೊತ್ತಿರುವುದಿಲ್ಲ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ರಾಜ್ಯ ನಮ್ಮದು. ನಮ್ಮ ಕನ್ನಡ ಸಾಹಿತ್ಯ ಸತ್ವಯುತವಾಗಿದೆ, ಕನ್ನಡದ ಸಾಹಿತಿ ಕವಿಗಳಲ್ಲಿ ಅಷ್ಟೊಂದು ತಾಕತ್ತು ಇದೆ. ನಮ್ಮ ರಾಜ್ಯದ ಏಕೀಕರಣ ದಂತಹ ವಿಚಾರಗಳು ಕೂಡ ಮಕ್ಕಳಿಗೆ ತಿಳಿಯುವಂತಾಗಬೇಕು ಅಂತ ಶೋಭಾ ಕರಂದ್ಲಾಜೆ ಹೇಳಿದರು.