
Udupi: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿಆತ್ಮಹತ್ಯೆ
ಉಡುಪಿ ಜಿಲ್ಲೆಯ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ (80) ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿಕಟ್ಟೆ ಭೋಜಣ್ಣ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿರುವ ಭೋಜಣ್ಣ ಶೆಟ್ಟಿ ಅವರ, ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರ ಭೇಟಿ ತನಿಖೆ ಪರಿಶೀಲನೆ ನಡೆಸುತ್ತಿದ್ದಾರೆ..