ವಿದ್ಯಾವಂತೆ ಎಂಬ ಕಾರಣಕ್ಕೆ ಮಹಿಳೆ ಉದ್ಯೋಗಕ್ಕೆ ಹೋಗಲೇ ಬೇಕೆಂದಿಲ್ಲ- High Court ಹೀಗೆ ಹೇಳಿದ್ದು ಯಾಕೆ ನೋಡಿ
ಮುಂಬೈ: ಮಹಿಳೆ ವಿದ್ಯಾವಂತೆ ಎನ್ನುವ ಕಾರಣಕ್ಕೆ ತನ್ನ ಜೀವನ ನಿರ್ವಹಣೆಗೆ ದುಡಿಯುವಂತೆ ಒತ್ತಾಯಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಪುಣೆಯ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕ ಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚ್ಛೇದಿತ ಯುವತಿಯೋರ್ವಳು ತನ್ನ ಮಾಜಿ ಗಂಡನಿಂದ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದು, ಆಕೆ ವಿದ್ಯಾವಂತಳಾಗಿದ್ದು, ಸ್ಥಿರ ಆಸ್ತಿಯ ಮೂಲವಿದೆ. ಈ ನಿಟ್ಟಿನಲ್ಲಿ ಆಕೆಗೆ ಜೀವನಾಂಶ ಕೊಡುವ ಅಗತ್ಯವಿಲ್ಲ ಎಂದು ವಾದಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಹಿಳೆ ಶೈಕ್ಷಣಿಕ ಪದವಿ, ಅರ್ಹತೆ ಹೊಂದಿದ್ದರೂ ಕೆಲಸ ಮಾಡಬಹುದು ಇಲ್ಲವೇ ಮನೆಯಲ್ಲೇ ಉಳಿಯುವ ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದೆ. ಅಲ್ಲದೇ ಆಕೆ ಪತಿಯೊಂದಿಗೆ ವಿಚ್ಛೇದನ ಪಡೆದ ನಂತರ ಜೀವನಾಂಶ ಪಡೆಯುವ ಸಾಮರ್ಥ್ಯ ಹೊಂದಿರುತ್ತಾಳೆ ಎಂದು ಹೇಳಿದೆ.