RSS ಚಡ್ಡಿ ಸಂಸ್ಕೃತಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು ; ರಘುಪತಿ ಭಟ್
Saturday, June 4, 2022
ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿರುವ
ಆರ್ ಎಸ್ ಎಸ್ ಚಡ್ಡಿ ಸುಡಿ ಅಭಿಯಾನಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಟಾಂಗ್ ನೀಡಿದ್ದಾರೆ.. ಉಡುಪಿ ಇದೇ ವಿಚಾರವಾಗಿ ಮಾತನಾಡಿದ ಶಾಸಕರು, ಆರ್ ಎಸ್ ಎಸ್ ಚಡ್ಡಿ ಸಂಸ್ಕೃತಿ ಬಿಟ್ಟು ಪ್ಯಾಂಟಿಗೆ ಬಂದು ಬಹಳ ಸಮಯವಾಯಿತು
ಸಿದ್ದರಾಮಯ್ಯಗೆ ಆರೆಸ್ಸೆಸ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈಗ ನಮ್ಮ ಗಣವೇಶ ಅಂಗಿ ಪ್ಯಾಂಟ್ ಆಗಿದೆ ಅಂತ ಹೇಳಿದ್ದಾರೆ.. ಸಿದ್ದರಾಮಯ್ಯ ರಾಜಕೀಯ ಕಾರಣಕ್ಕೆ ಹೀಗೆ ಮಾತನಾಡುತ್ತಾರೆ. ಆ ಚಡ್ಡಿ ಇದ್ದದ್ದರಿಂದ ದೇಶದಲ್ಲಿ ಒಳ್ಳೆಯ ವಾತಾವರಣ ಇದೆ. ಆರ್ ಎಸ್ ಎಸ್ ಇಲ್ಲದೇ ಇರುತ್ತಿದ್ದರೆ ದೇಶದ ಪರಿಸ್ಥಿತಿ ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ.ಆರೆಸ್ಸೆಸ್ ಸಿದ್ದರಾಮಯ್ಯಗೆ ಏನು ಮಾಡಿದೆಯೋ ಗೊತ್ತಿಲ್ಲ.ದೇಶಭಕ್ತರ ತಯಾರು ಮಾಡುವ ಸಂಸ್ಥೆ ಆರ್ ಎನ್ ಎಸ್ ರಾಷ್ಟ್ರೀಯತೆ ಮತ್ತು ಒಳ್ಳೆಯ ಶಿಕ್ಷಣ ಕೊಡುತ್ತಿರುವುದೇ ಆರೆಸ್ಸೆಸ್ ಆರೆಸ್ಸೆಸ್ ಇರುವುದರಿಂದ ಸಿದ್ದರಾಮಯ್ಯನ ಬೇಳೆ ಬೆಳೆಯುತ್ತಿಲ್ಲ
ಆರ್ ಎಸ್ ಎಸ್ ಏನು ಎಂಬುದು ಇಡೀ ವಿಶ್ವಕ್ಕೇ ಗೊತ್ತು ಅಂತ ಸಿದ್ದ ರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ..