UDUPI : 16 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
Wednesday, June 15, 2022
ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು
ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕು ಕಾಶಿಬೆಟ್ಟು ನಿವಾಸಿ ವೇಲು, ಕಾರ್ಕಳದಲ್ಲಿ ಕೇಬಲ್ ವ್ಯಾಪಾರ ನಡೆಸುತ್ತಿದ್ದ ಕುಕ್ಕುಂದೂರು ಹುಡ್ಕೊ ನಿವಾಸಿ ಪ್ರಶಾಂತ್ ನಾಯಕ್ ಅವರಿಗೆ 2006ರಲ್ಲಿ ಚೂರಿ ತೋರಿಸಿ ಬೆದರಿಕೆ ಒಡ್ಡಿ, ಬಳಿಕ ತಲೆಮರೆಸಿಕೊಂಡಿದ್ದ. ಕಾರ್ಕಳದ ನ್ಯಾಯಾಲಯವು ಆರೋಪಿಯ ದಸ್ತಗಿರಿಗಾಗಿ ಬಂಧನ ವಾರಂಟ್ ಹೊರಡಿಸಿತ್ತು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ವೇಲು ಜೂ. 13ರಂದು ಬೆಳ್ತಂಗಡಿಗೆ ಬಂದಿರುವ ಮಾಹಿತಿ ಪಡೆದ ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.