UDUPI : ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂ.ಜಾ.ವೇ ಬೃಹತ್ ಪ್ರತಿಭಟನೆ
Thursday, June 30, 2022
ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್
ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು
ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮುನ್ನ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಜಡಿ ಮಳೆಯ ನಡುವೆಯೂ ಉಡುಪಿಯ ಬೋರ್ಡ್ ಹೈಸ್ಕೂಲ್ ಸಮೀಪದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯವರು, ಕೊಲೆ ಗಡುಕರ ವಿರುದ್ಧ ಘೋಷಣೆ ಕೂಡಿದ್ದರು. ಇನ್ನೂ ಪ್ರತಿಭಟನೆಯಲ್ಲಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಇಬ್ಬರು ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಹಾದಿ ಶಕ್ತಿಗಳಿಗೆ ನಾವು ಹೆದರುದಿಲ್ಲ ಅಂತ ಹೇಳಿದರು.