-->

UDUPI : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನ ಮಾಡಿ ಮನೆಯವರ ಮಾನವೀಯತೆ

UDUPI : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನ ಮಾಡಿ ಮನೆಯವರ ಮಾನವೀಯತೆ

ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮೆದುಳು ನಿಷ್ಕ್ರಿಯವಾದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಮನೆಯವರು ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದೆ. ಇತ್ತೀಚೆಗೆ ಬ್ರಹ್ಮಾವರ ತಾಲೂಕಿ ಕೊಕ್ಕರ್ಣೆಯಲ್ಲಿ ರಸ್ತೆಯಲ್ಲಿ  ನವೀನ್( 38)  ಎಂಬ ಯುವಕ ಅಪಘಾತಕ್ಕೆ ಒಳಗಾಗಿದ್ದ. ಅಪಘಾತಕ್ಕೀಡಾಗಿ ನವೀನ್ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ದ್ದರು. ಕೆಎಂಸಿ ವೈದ್ಯರು  ಅವರನ್ನು  ರಕ್ಷಿಸಲು ಪ್ರಯತ್ನಿಸಿದರೂ,  ಅವರು  ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ .ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ನವೀನ್ ಅವರ ಪತ್ನಿ ಮಲ್ಲಿಕಾ ಮತ್ತು ಅವರ ಕುಟುಂಬ ಸದಸ್ಯರು ಇತರ  ರೋಗಿಗಳ ಜೀವ ಉಳಿಸಲು  ಅಂಗಗಳನ್ನು ದಾನ ಮಾಡಲು ತಮ್ಮ  ಒಪ್ಪಿಗೆ ಸೂಚಿಸಿದರು. ಅದರಂತೆ  ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ  ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು  6 ಜನರ ಜೀವ ಉಳಿಸಲು ಸಹಾಯವಾಗಿದೆ. ಈ ಪೈಕಿ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ  ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ನವೀನ್ ಅವರ ಯಕೃತ್ತು ಮತ್ತು ಒಂದು ಕಿಡ್ನಿಯನ್ನು  ಕೆ ಎಂ ಸಿ ಆಸ್ಪತ್ರೆಯಿಂದ ಇವತ್ತು ಝೀರೋ ಟ್ರಾಫಿಕ್ ಮೂಲಕ ಮಂಗಳೂರಿಗೆ  ಕಳುಹಿಸಿಕೊಡಲಾಯಿತು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99