-->

UDUPI ; ಉಡುಪಿಯಲ್ಲಿ ಚಿಕ್ಕ ಮೇಳ ತಿರುಗಾಟ ಆರಂಭ

UDUPI ; ಉಡುಪಿಯಲ್ಲಿ ಚಿಕ್ಕ ಮೇಳ ತಿರುಗಾಟ ಆರಂಭ

ಕರಾವಳಿಯ ಹೆಮ್ಮೆಯ ಜಾನಪದ ಕಲೆ ಯಕ್ಷಗಾನ.
ವರ್ಷದ ಮಳೆಗಾಲವನ್ನು ಹೊರತು ಪಡಿಸಿ ನವೆಂಬರ್ ನಿಂದ ಮೇ ವರೆಗೂ ಉಡುಪಿ ಜಿಲ್ಲೆಗಳಲ್ಲಿ ಸುಮಾರು ೪೦ಕ್ಕೂ ಹೆಚ್ಚು ಮೇಳಗಳು ತಿರುಗಾಟ ನಡೆಸುತ್ತವೆ. ಸುಮಾರು ೬೦೦ ಕಲಾವಿದರು ಈ ಕಲೆಯನ್ನು ನಂಬಿ ಜೀವನ ನಡೆಸುತ್ತಾರೆ. ಆದ್ರೆ ಮಳೆಗಾಲದಲ್ಲಿ ಕಲಾವಿದರ ಜೀವನ ನಿರ್ವಹಣೆ ಕಷ್ಟವೇ ಸರಿ. ಈ ಕಾರಣದಿಂದ ಹಿಂದಿನ ಕಾಲದಿಂದ ಮಳೆಗಾಲದಲ್ಲಿ ಚಿಕ್ಕ ಮೇಳಗಳು ತಿರುಗಾಟ ನಡೆಸುತ್ತವೆ. ಕೇವಲ ೪ ಅಥವಾ ೫ ಜನ ಕಲಾವಿದರು ಮನೆಮನೆಗೆ ತೆರಳಿ ಅಲ್ಪ ಅವಧಿಯ ಯಕ್ಷಗಾನ ಸೇವೆ ಸಲ್ಲಿಸುತ್ತಾರೆ. ಒಂದು ಊರಿನ ಹಲವು ಮನೆಗಳಿಗೆ ತೆರಳಿ ಚಿಕ್ಕ ಮೇಳ ಬರುವ ಸಮಯವನ್ನು ಮೊದಲೇ ತಿಳಿಸಲಾಗುತ್ತದೆ. ದಿನದಲ್ಲಿ ಸಂಜೆ ೭ ರಿಂದ ರಾತ್ರಿ ೧೦ರ ತನಕ ಚಿಕ್ಕ ಮೇಳಗಳು ತಿರುಗಾಟ ನಡೆಸುತ್ತವೆ. ಮನೆಗೆ ಬಂದ ಕಲಾ ತಂಡವನ್ನು ಮನೆಯವರು ಸ್ವಾಗತಿಸುತ್ತಾರೆ. ಹೂ ಹಣ್ಣು ಅಕ್ಕಿ ತೆಂಗಿನಕಾಯಿ ಮತ್ತು ದೀಪ ಇಟ್ಟು ಅಲ್ಲಿ ಪ್ರಾರ್ಥನೆ ಸಲ್ಲಿಸಿ, ಯಾವುದಾದರೂ ಒಂದು ಪ್ರಸಂಗದ ಚಿಕ್ಕ ಬಾಗವನ್ನು ಮನೆಯಲ್ಲಿ ಪ್ರದರ್ಶಿಸುತ್ತಾರೆ. ಒಂದು ಸ್ತ್ರೀ ವೇಷ ಇನ್ನೊಂದು ಪುರುಷ ವೇಷ ಧಾರಿ ಮತ್ತು ಹಿಮ್ಮೇಳದ ಇಬ್ಬರು ಕಲಾವಿದರು ತಂಡದಲ್ಲಿರುತ್ತಾರೆ. ಪ್ರತಿ ಮನೆಯಲ್ಲಿ ಕಲಾವಿದರಿಗೆ ಕಾಣಿಕೆಯನ್ನೂ ನೀಡಲಾಗುತ್ತದೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99