
UDUPI : ಮನೆಯಿಂದ ಚಿನ್ನಾಭರಣ ಕಳವು : ಖದೀಮನ ಬಂಧನ
ಉಡುಪಿ ಜಿಲ್ಲೆಯ ಕುಂದಾಪುರದ ಹಳ್ಳಿಹೊಳೆ ಗ್ರಾಮದ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಶಂಕರನಾರಾಯಣ ಪೊಲೀಸ್ ರು ಬಂಧಿಸಿದ್ದಾರೆ. ಉಪ್ಪುಂದದ ಶ್ರೀಧರ ಮಡಿವಾಳ (38) ಬಂಧಿತ ಆರೋಪಿ.
ಶ್ರೀಧರ ಮಡಿವಾಳ, ರಾತ್ರಿ ಕಮಲಶಿಲೆ ಗ್ರಾಮದ ಹಳ್ಳಿಹೊಳೆ ಎಂಬಲ್ಲಿ ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಕೋಣೆಯಲ್ಲಿ ಇರಿಸಿದ ಸುಮಾರು 1,30,000 ಲಕ್ಷ ಬೆಲೆ ಬಾಳುವ 28 ಗ್ರಾಂ ತೂಕದ 2 ಚಿನ್ನದ ಬಳೆ ಸುಮಾರು 1,50,000 ಲಕ್ಷ ಬೆಲೆ ಬಾಳುವ ಮಲ್ಲಿಗೆ ಮೊಗ್ಗಿನ 30 ಗ್ರಾಂ ಚಿನ್ನದ ಸರ -1, ಸುಮಾರು 20,000 ಬೆಲೆ ಬಾಳುವ ಮೂರು ಹರಳಿನ 4 ಗ್ರಾಂ ಚಿನ್ನದ ಉಂಗುರ, 5 ಸಾವಿರ ನಗದು ಹಣ ಕಳವು ಮಾಡಿದ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಕೈಗೆತ್ತಿಕೊಂಡ ಶಂಕರನಾರಾಯಣ ಪೊಲೀಸ್ ರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ, ಆರೋಪಿಯಿಂದ ಕಳವು ಮಾಡಿದ 2 ಚಿನ್ನದ ಬಳೆಗಳು, 1 ಮಲ್ಲಿಗೆ ಮೊಗ್ಗಿನ ಚಿನ್ನದ ಸರ, ಹಾಗೂ ಒಂದು ಚಿನ್ನದ ಉಂಗುರ ಸೇರಿ ಒಟ್ಟು 3 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.