UDUPI; ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ; ಇಬ್ಬರು ವಶಕ್ಕೆ
Friday, June 24, 2022
ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಲಾರಿಯಲ್ಲಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಯಡ್ತರೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಗಸ್ತಿನಲ್ಲಿರುವಾಗ ಶಿರೂರು ಕಡೆಯಿಂದ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ವೇಳೆ ಲಾರಿಯಲ್ಲಿದ್ದ ಚಾಲಕ ಸುನೀಲ್ ಹೆಚ್.ಆರ್, ಮಹಮ್ಮದ್ ಸಮೀರನನ್ನಯ ವಶಕಗಲೆ ಪಡೆದು ವಿಚಾರಿಸಿದಾಗ ಅಕ್ರಮ ಸಾಗಾಟ ಖಚಿತವಾಯಿತು. ಒಟ್ಟು ೧೬ ಟನ್‌ನಷ್ಟು ಅಕ್ಕಿ ಇತ್ತು. ಈ ಪಡಿತರ ಅಕ್ಕಿ ಮೌಲ್ಯ ೪ ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.