UDUPI : ಯಶ್‍ಪಾಲ್ ಸುವರ್ಣಗೆ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ; ಆರೋಪಿಗೆ ಜಾಮೀನು
Friday, June 24, 2022
ಬಿಜೆಪಿ ಮುಖಂಡ ಯಶ್‍ಪಾಲ್ ಸುವರ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪಿ, ಮಹಮ್ಮದ್ ಶಾಫಿಗೆ ಉಡುಪಿ ಎರಡನೇ ಹೆಚ್ಚುವರಿ ಜೆ.ಎಂ.ಎಫ್.ಸಿ ನ್ಯಾಯಾಲಯ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಬಿಡುಗಡೆ ಗೊಳಿಸಿದೆ.
ಯಶ್ಪಾಲ್ ಸುವರ್ಣ ಹತ್ಯೆಗೈದವರಿಗೆ 10 ಲಕ್ಷ ರೂ ನೀಡುವುದಾಗಿ ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪ ಈತನ ಮೇಲಿತ್ತು. ಈ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ಕಾನೂನಿನ ಪ್ರಕಾರ ಮಾನ್ಯತೆಯನ್ನೇ ಪಡೆಯುತ್ತಿಲ್ಲ. ಕಾಪು ಪೊಲೀಸರು ಅಧಿಕಾರ ದುರುಪಯೋಗ ಮಾಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಆರೋಪಿ ಪರ ವಕೀಲ ವಕೀಲ ಅಸದುಲ್ಲಾ ಕಟಪಾಡಿ ವಾದಿಸಿದ್ದರು.