UDUPI : ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು
Saturday, June 25, 2022
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದುಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಹೊಸಂಗಡಿ ಕೆರೆಕಟ್ಟೆ ಬಳಿ ನಡೆದಿದೆ.
ಬೈಕ್ ಹಿಂಬದಿ ಸವಾರ, ಗಂಗನಾಡು ಕ್ಯಾತ್ತೂರು ನಿವಾಸಿ ಸೃಜನ್ ನಾಗರಾಜ ಮರಾಠಿ(19) ಮೃತಪಟ್ಟವರು. ಬೈಕ್ ಸವಾರ ದಿವಾಕರ ನಾಯ್ಕ (19) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೃಜನ್ ಗಂಗನಾಡಿಂದ ಹೊಸಂಗಡಿ ಅಜ್ಜಿ ಮನೆಗೆ ಬಂದಿದ್ದು, ಸಂಬಂಧಿ ದಿನಕರ ಜತೆ ಬೈಕಲ್ಲಿ ತೆರಳುತ್ತಿರುವಾಗ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.