-->
ads hereindex.jpg
UDUPI :  ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬ ಕಳವು

UDUPI : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬ ಕಳವು

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂ. ಹಾಗೂ 500 ರೂ. ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳ್ಳತನ ಮಾಡಲಾಗಿದೆ.  

ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ. ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ. 

ದ್ವಾರದಲ್ಲಿದ್ದ ಎರಡು ಲಾಕರ್ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕಂಡು ಬಂದಿದೆ. ದೇಗುಲದ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ. ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ.ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ads on article

Advertise in articles 1

advertising articles 2