
UDUPI ; ಜೀಪು ಸ್ಕಿಡ್ ಆಗಿ ಪಲ್ಟಿ : ಗಂಭೀರ ಗಾಯಗೊಂಡ ಬಾಲಕಿ ಸಾವು
Monday, June 20, 2022
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಡೆದ ಭೀಕರ ಅಪಘಾತದಲ್ಲಿ ಜೀಪು ಪಲ್ಟಿಯಾಗಿ ಬಾಲಕಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಜಯರಾಮ ಎಂಬುವವರಿಗೆ ಸೇರಿದ ಜೀಪು, ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿತ್ತು, ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಜೀಪ್ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಜೀಪ್‌ನಲ್ಲಿ ಇದ್ದವರಿಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಬಾಲಕಿಯೊಬ್ಬಳು ಸಾವನ್ಪಿದ್ದಾಳೆ.
ಮೂವರಿಗೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರಿಗೆ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕುಳಾಯಿಯಿಂದ ಖಾಸಗಿ ಕಾರ್ಯಕ್ರಮ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.