UDUPI : ಸಮಾಜಸೇವಕರ ಸಮಯಪ್ರಜ್ಞೆಯಿಂದ ತಪ್ಪಿದ ಆತ್ಮಹತ್ಯೆ
Wednesday, June 22, 2022
ಸಮಾಜಸೇವಕರ ಸಮಯಪ್ರಜ್ಞೆಯಿಂದ ಆತ್ಮಹತ್ಯೆಗೈಯಲು ಬಂದಿರುವ ಅಪರಿಚಿತ ವ್ಯಕ್ತಿಯೊಬ್ಬರು ಬದುಕುಳಿದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮಂಗಳೂರು ಮೂಲದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗ್ರಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕ ನಿತ್ಯಾನಂದ ಒಳಕಾಡು, ಮನನೊಂದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ವ್ಯಕ್ತಿಯನ್ನು ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಇವರು ಹೋಟೆಲಿನಲ್ಲಿ ಬಾಣಸಿಗರಾಗಿದ್ದರೆಂದು ತಿಳಿದುಬಂದಿದೆ.