
UDUPI: ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಮನೆಯ ಕಾರು ಶೆಡ್ಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿ ಪುತ್ತೂರು- ಸುಬ್ರಹ್ಮಣ್ಯ ವಾರ್ಡಿನಲ್ಲಿ ನಡೆದಿದೆ. ಲೀಲಾ ಶೆಡ್ತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ನೇಣುಬಿಗಿದ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದನ್ನು ಧೃಡಿಕರಿಸಿದರು. ಮಹಿಳೆಯ ಪತಿ ಆಸ್ಪತ್ರೆಯಲ್ಲಿ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಕೃತ್ಯ ಎಸಗಿದ್ದಾರೆ. ನಗರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.