UDUPI : ಕರ್ತವ್ಯ ನಿರತ ಶಿಕ್ಷಕ ಹೃದಯಾಘಾತದಿಂದ ಸಾವು
Friday, June 24, 2022
ಕರ್ತವ್ಯ ನಿರತ ಚಿತ್ರಕಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಶಾಲೆಯಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಆನಂದ್ ಜಿ ಗಂಧದ್ (44) ಸಾವಿಗೀಡಾದ ಶಿಕ್ಷಕ. ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆನಂದ್ ಜಿ ಗಂಧದ್ ಕೆಲಸ ಮಾಡುತ್ತಿದ್ದು, ಮಧ್ಯಾಹ್ನದ ಊಟದ ವಿರಾಮದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಅವರನ್ನು ಮಣಿಪಾಲದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆನಂದ್ ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.