UDUPI : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು
Tuesday, June 28, 2022
ಕಾಲು ಜಾರಿ ಬಾವಿಗೆ ಬಿದ್ದು ಸಾವನ್ಪಿದ ವ್ಯಕ್ತಿಯ ಶವವನ್ನು ಅಗ್ನಿಶಾಮಕ ದಳದವರು ಹಗ್ಗದ ಸಹಾಯದಿಂದ ಮೇಲಕ್ಕೆತ್ತಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆಯ ಸಾಲಿಕೇರಿಯಲ್ಲಿ ಇಂದು ನಡೆದಿದೆ. ಸಾಲಿಕೇರಿಯ ಶಂಕರಪ್ರಭು(82) ಬಾವಿಗೆ ಬಿದ್ದು ಸಾವನ್ಪಿದ ವೃದ್ಧ. ಶಂಕರ ಪ್ರಭು ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದರು. ಬಾವಿಗೆ ಬಿದದ್ದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ, ಶಂಕರ ಪ್ರಭು ಸಾವನ್ಪಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಶಂಕರ ಪ್ರಭು ಅವರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.