
UDUPI : ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತವಾಗುತ್ತದ್ದು, ಉಡಪಿ ನಗರ ಸೇರಿದಂತೆ ಕಾಪು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ದರೆಗುರುಳಿದೆ.