UDUPI: ಯಕ್ಷಗಾನ ಕಲಾರಂಗದಿಂದ ಬಡ ವಿದ್ಯಾರ್ಥಿಗಳಿಗೆ ಮನೆ ನಿರ್ಮಾಣ
Tuesday, June 21, 2022
ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗೊಸಿಕೊಂಡ ಸಂಸ್ಥೆ ಉಡುಪಿಯ ಯಕ್ಷಗಾನ ಕಲಾರಂಗ. ಈ ಸಂಸ್ಥೆಯ ಮತ್ತೊಂದು ಪುಣ್ಯದ ಕೆಲ್ಸ ಅಂದ್ರೆ ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವ ವಿದ್ಯಾ ಪೋಷಕ್ ಯೋಜನೆ. ವಿದ್ಯಾಪೋಷಕ್ ಯೋಜನೆಯಲ್ಲಿ ಕೇವಲ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುದಷ್ಟೇ ಅಲ್ಲದೇ, ಬದುಕು ಕಟ್ಟಿಕೊಡುವ ಸಾರ್ಥಕ ಕೆಲಸ ನಡೆಸುತ್ತಿದೆ.
ಈವರೆಗೆ 30 ವಿದ್ಯಾರ್ಥಿಗಳಿಗೆ ಮನೆ ಕಟ್ಟಿಸಿ ಕೊಟ್ಟಿರುವ ಯಕ್ಷಗಾನ ಕಲಾರಂಗ ಸಂಸ್ಥೆ. ಇದೀಗ 31ನೇ ಮನೆಯ ಹಸ್ತಾಂತರ ಮಾಡಿದೆ. ಕಡುಬಡತನದಲ್ಲಿ ಇರುವ ಮಕ್ಕಳನ್ನು ಗುರುತಿಸಿ, ಅವರ ಮನೆಯ ಸ್ಥಿತಿಗತಿಯನ್ನು ನೋಡಿ, ಶಿಕ್ಷಣದ ಜೊತೆಗೆ ಬದುಕು ಕಟ್ಟಿಕೊಡುವ ಕೆಲಸ ಕಲಾರಂಗ ಸಂಸ್ಥೆಯ ಮೂಲಕ ಆಗುತ್ತಿದೆ. ಈ ರೀತಿ ದಾನಿಗಳ ನೆರವಿನಿಂದ ಈವರೆಗೆ 30 ಮನೆಗಳನ್ನು ಹಸ್ತಾಂತರಿಸಲಾಗಿದೆ.
ಯಕ್ಷಗಾನ ಕಲಾರಂಗ ನಿರ್ಮಿಸಿದ 31ನೇ ಮನೆಯ ಹಸ್ತಾಂತರ ಸಮಾರಂಭ ಹಿರಿಯಡ್ಕ ಸಮೀಪದ ಕೊಂಡಾಡಿಯಲ್ಲಿ ಜರಗಿತು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರಾದ ರಕ್ಷಿತಾ ಪೂಜಾರಿ ಹಾಗೂ ಧನ್ಯ ಪೂಜಾರಿ ಇವರಿಗೆ ಪೇಜಾವರ ಮಠ ಮತ್ತು ಗುರುರಾಜ ಅಮೀನ್‍ರ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿತ್ತು. ‘ಶ್ರೀಗುರುಕೃಪಾ’ ಹೆಸರಿನ ಮನೆ ಹಸ್ತಾಂತರದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶುಭ ಕೋರಿದರು..