-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI : ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರಿಗೆ ಗಾಯ

UDUPI : ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಉಡುಪಿಯ ಕೊಡವೂರು ಸಮೀಪದ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ನಡೆದಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದು ಬಚಾವಾದರು.ಈ ವೇಳೆ  ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿಷಯ ತಿಳಿದು ಸಮಾಜ ಸೇವಕ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99