
UDUPI : ನಾಗರಹಾವು ಕಚ್ಚಿ ವ್ಯಕ್ತಿ ಸಾವು
ನಾಗರಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಿದಿಯೂರು ಸುಧಾಕರ ಅಮೀನ್ ಮೃತಪಟ್ಟ ವ್ಯಕ್ತಿ. ಜೂ. 8ರಂದು ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಬಟ್ಟೆ ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ. ಕೂಡಲೇ ಸುಧಾಕರ ಅಮೀನ್ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.