ಇದು ರಾಜ್ಯದ ಇತಿಹಾಸದಲ್ಲೇ ಮೊದಲು....: ADGP ಅಮೃತ್‌ಪಾಲ್ ಬಂಧನ
ಬೆಂಗಳೂರು: ಪಿಸ್ಸೈ ನೇಮಕಾತಿ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ADGP ರ್ಯಾಂಕ್‌ನ ಅಧಿಕಾರಿಯೋರ್ವರ ಬಂಧನ ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣ ವಾಗಿದೆ.
ಅಮೃತ್ ಪಾಲ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಇತ್ತೀಚೆಗೆ ನಡೆದ ಪಿಎಸ್ಸೈ ನೇಮಕಾತಿ ಅಕ್ರಮಕ್ಕೆ ಅಮೃತ್ ಪಾಲ್ ಕೂಡಾ ಸಾಥ್ ನೀಡಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ನಾಲ್ಕನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾಗ ಅವರನ್ನು ಬಂಧಿಸಲಾಗಿದೆ.
ಅಕ್ರಮ ಕೇಳಿಬಂದ ಮೇಲೆ ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅಮೃತ್ ಪಾಲ್ ಅವರ ಕಚೇರಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಒಎಂಆರ್ ಶೀಟ್ ತಿದ್ದಲಾಗಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಖಚಿತ ಸಾಕ್ಷ್ಯಗಳು ಸಿಕ್ಕಿದ್ದರಿಂದಲೇ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.