Bengaluru: ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ಅದೇ ಶಾಲೆಯ ವಿದ್ಯಾರ್ಥಿ - ಯಾಕೆ ಗೊತ್ತಾ?
Wednesday, July 20, 2022
ಬೆಂಗಳೂರು: ರಾಜರಾಜೇಶ್ವರಿನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಹಾಕಿದ್ದು ಯಾರೆಂದು ತಿಳಿದುಬಂದಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂದು ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ.
ಜುಲೈ 21ರಂದು ಶಾಲೆಯಲ್ಲುಲಿ ಪರೀಕ್ಷೆಗಳು ನಿಗದಿ ಆಗಿದ್ದವು. ಆದರೆ, ವಿದ್ಯಾರ್ಥಿ ಇದಕ್ಕೆ ತಯಾರಿ ನಡೆಸಿರಲಿಲ್ಲ. ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ಪರೀಕ್ಷೆ ಮುಂದೂಡುವ ಸಲುವಾಗಿ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
ತಂದೆಯ ಲ್ಯಾಪ್‌ಟಾಪ್‌ನಿಂದ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಸೃಷ್ಟಿಸಿ, ಅದೇ ಇ-ಮೇಲ್‌ನಿಂದ ಶಾಲೆ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ.
ವಿಶೇಷ ಅಂದರೆ ಸೋಮವಾರವೂ ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಬಂದಿದ್ದು, ಪೊಲೀಸರು ಶೋಧ ನಡೆಸುವಾಗಲೂ ಈ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿದ್ದ