ರಸ್ತೆಯಲ್ಲಿ ನಡೆಯುತ್ತಿದ್ದ ಮಹಿಳೆಯನ್ನು ಹಿಂದಿನಿಂದ ಅಪ್ಪಿ ಹಿಡಿದು ಲೈಂಗಿಕ ಕಿರುಕುಳ - CCTVಯಲ್ಲಿ ಸೆರೆಯಾಯಿತು ದೃಶ್ಯ
Saturday, July 23, 2022
ಇಸ್ಲಾಮಾದ್/ ಪಾಕಿಸ್ಥಾನ: ರಸ್ತೆಯಲ್ಲಿ ನಡೆಯುತ್ತಿದ್ದ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿರುವ ಸಿಸಿಟಿವಿ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ ಎನ್ನಲಾಗಿದೆ.
ಪಾಕಿಸ್ತಾನದ ಪತ್ರಕರ್ತ ಹಮೀದ್ ಮೀರ್ ವಿಡಿಯೊವನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪರಾಧಿಯನ್ನು ಪತ್ತೆಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿದ್ದಾರೆ.
ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿ ಅವರನ್ನು ಹಿಂಬದಿಯಿಂದ ಬಂದು ಅಪ್ಪಿ ಹಿಡಿದು, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.