-->

ದಸರಾ ಪ್ರಚಾರಕ್ಕೆ ಹಣ ಸುರಿದ ರಾಜ್ಯ ಸರಕಾರ - ಯಾರಿಗೆಲ್ಲಾ ಬಂಪರ್ ಗೊತ್ತಾ?...

ದಸರಾ ಪ್ರಚಾರಕ್ಕೆ ಹಣ ಸುರಿದ ರಾಜ್ಯ ಸರಕಾರ - ಯಾರಿಗೆಲ್ಲಾ ಬಂಪರ್ ಗೊತ್ತಾ?...

ಬೆಂಗಳೂರು: ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಷ್ಟಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022 ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಿದರು.

ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ  ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು.  ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನನಿಲ್ದಾಣಗಳಲ್ಲಿ  ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸುರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
 
ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನ: ಪ್ರಾರಂಭಿಸಲಾಗುವುದು ಎಂದರು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1.00 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ  ಬಗ್ಗೆ  ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99